ಯೆಹೋಶುವ 12:6 - ಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರ ಸಹಿತವಾಗಿ ಈ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಕುಲದ ಅರ್ಧಜನರಿಗೂ ಶಾಶ್ವತ ಸೊತ್ತಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನೂ ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನ ಸೇವಕನಾದ ಮೋಶೆಯು ಮತ್ತು ಇಸ್ರೇಲರು ಈ ಎಲ್ಲ ಅರಸರನ್ನು ಸೋಲಿಸಿದರು. ಮೋಶೆಯು ಈ ಪ್ರದೇಶವನ್ನು ರೂಬೇನನ ಕುಲದವರಿಗೂ ಗಾದನ ಕುಲದವರಿಗೂ ಮನಸ್ಸೆ ಕುಲದ ಅರ್ಧಜನರಿಗೂ ಸ್ವಾಸ್ತ್ಯವಾಗಿ ಕೊಟ್ಟುಬಿಟ್ಟನು. ಅಧ್ಯಾಯವನ್ನು ನೋಡಿ |