Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:8 - ಕನ್ನಡ ಸಮಕಾಲಿಕ ಅನುವಾದ

8 ಇಳಿಜಾರಿನ ಪ್ರದೇಶ, ಬೆಟ್ಟದ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ್, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ನಾಡುಗಳನ್ನು ಇಸ್ರಾಯೇಲ್ ಕುಲಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣಪ್ರಾಂತ್ಯ ಇವುಗಳನ್ನೂ ಇವುಗಳನ್ನು ಆಳುತ್ತಿದ್ದ ಹಿತ್ತೀಯ, ಅಮೋರಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ ಅವರ ನಾಡುಗಳನ್ನು ಇಸ್ರಯೇಲ್ ಕುಲಭಾಗಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಬೆಟ್ಟಗಳ ಬುಡದಲ್ಲಿರುವ ಸೀಮೆ, ಅರಣ್ಯ, ದಕ್ಷಿಣಪ್ರಾಂತ್ಯ ಇವುಗಳಲ್ಲಿ ಆಳುತ್ತಿದ್ದ ಹಿತ್ತಿಯ ಅಮೋರಿಯ ಕಾನಾನ್ ಪೆರಿಜ್ಜೀಯ ಹಿವ್ವಿಯ ಯೆಬೂಸಿಯ ಅರಸರನ್ನು ಸೋಲಿಸಿ ಅವರ ದೇಶಗಳನ್ನು ಇಸ್ರಾಯೇಲ್ ಕುಲಭಾಗಗಳಿಗೆ ಸ್ವಾಸ್ತ್ಯವಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪರ್ವತ ಪ್ರದೇಶ, ಪಶ್ಚಿಮದಿಕ್ಕಿನ ಇಳಿಜಾರು ಪ್ರದೇಶ, ಜೋರ್ಡನ್ ಕಣಿವೆ, ಪೂರ್ವದಿಕ್ಕಿನ ಬೆಟ್ಟಗಳು, ಮರುಭೂಮಿ ಮತ್ತು ನೆಗೆವ್ ಇದರಲ್ಲಿ ಸೇರಿಕೊಂಡಿದ್ದವು. ಈ ಪ್ರದೇಶವು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ವಾಸಸ್ಥಾನವಾಗಿತ್ತು. ಇಸ್ರೇಲರು ಸೋಲಿಸಿದ ಅರಸರ ಪಟ್ಟಿಯು ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:8
14 ತಿಳಿವುಗಳ ಹೋಲಿಕೆ  

ಈ ಪ್ರಕಾರ ಗೋಷೆನ್ ಸೀಮೆ, ಅದರ ಕಣಿವೆ, ಬಯಲು ಪ್ರದೇಶ, ದಕ್ಷಿಣದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.


ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.


ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು.


ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.


ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ಏಕೆಂದರೆ ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಹಿವ್ವಿಯರು, ಅರ್ಕಿಯರು, ಸೀನಿಯರು,


ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.


ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.


ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.


ತರುವಾಯ ಯೆಹೂದ ಗೋತ್ರದವರು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು