ಯೆಹೋಶುವ 13:27 - ಕನ್ನಡ ಸಮಕಾಲಿಕ ಅನುವಾದ27 ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೊರ್ದನ್ ತಗ್ಗಿನಲ್ಲಿರುವ ಬೇತ್‍ಹಾರಾಮ್, ಬೇತ್ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ಪಟ್ಟಣಗಳು, ಕಿನ್ನೆರೆತ್ ಸಮುದ್ರದ [ದಕ್ಷಿಣದಿಕ್ಕಿನ] ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಯೊರ್ದನ್ ಪೂರ್ವಪ್ರದೇಶ ಇವುಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ಪ್ರದೇಶವು ಬೇತ್‌ಹಾರಾಮ್, ಬೇತ್ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು. ಅಧ್ಯಾಯವನ್ನು ನೋಡಿ |