ಯೆಹೋಶುವ 14:7 - ಕನ್ನಡ ಸಮಕಾಲಿಕ ಅನುವಾದ7 ದೇಶವನ್ನು ಸಂಚರಿಸಿ ನೋಡಲು ಯೆಹೋವ ದೇವರ ಸೇವಕನಾದ ಮೋಶೆಯು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ ನಾನು ನಾಲ್ವತ್ತು ವರ್ಷ ಪ್ರಾಯದವನಾಗಿದ್ದೆನು. ನನ್ನ ಮನಸ್ಸಿಗೆ ಬಂದಿದ್ದ ವರದಿಯನ್ನು ತಂದು ತಿಳಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರನ ದಾಸನಾದ ಮೋಶೆ ಈ ನಾಡನ್ನು ಸಂಚರಿಸಿ ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ನನ್ನನ್ನು ಕಳಿಸಿದಾಗ ನನಗೆ ನಾಲ್ವತ್ತು ವರುಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿನೋಡುವದಕ್ಕೋಸ್ಕರ ಕಾದೇಶ್‍ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಾಲ್ವತ್ತು ವರುಷವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನ ಸೇವಕನಾದ ಮೋಶೆಯು, ಈ ದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ನನ್ನನ್ನು ಕಳುಹಿಸಿದ್ದನು. ಆಗ ನನಗೆ ನಲವತ್ತು ವರ್ಷವಾಗಿತ್ತು. ನಾನು ಹಿಂತಿರುಗಿ ಬಂದಾಗ ಈ ದೇಶದ ಬಗ್ಗೆ ದೇವರ ವಾಗ್ದಾನಗಳನ್ನು ನಂಬಿ ಯಥಾರ್ಥವಾದ ಸಂಗತಿಗಳನ್ನು ಮೋಶೆಗೆ ಹೇಳಿದೆ. ಅಧ್ಯಾಯವನ್ನು ನೋಡಿ |