Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವುದೆಂದರೆ: ಕಟ್ಟಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಚಿನ್ ಮರುಭೂಮಿಯ ದಕ್ಷಿಣ ಭಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎದೋಮ್ ನಾಡು ಹಾಗೂ ಚಿನ್ ಮರುಭೂಮಿಯ ಎಲ್ಲೆಯಾಗಿರುವ ಕಾನಾನ್ ನಾಡಿನ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎದೋಮ್ ಸೀಮೆಯೂ ಚಿನ್ ಅರಣ್ಯವೂ ಮೇರೆಯಾಗಿರುವ ಕಾನಾನ್ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಆ ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಆ ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:1
13 ತಿಳಿವುಗಳ ಹೋಲಿಕೆ  

ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. ಇದೇ ದಕ್ಷಿಣದ ಮೇರೆ.


ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಬತ್ತುವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಸೊತ್ತಾಗಿ ಪಾಲು ಹಂಚಿದರು.


ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು.


ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.


ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ.


ಲವಣ ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ,


ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು.


ರೂಬೇನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ, ಪಶ್ಚಿಮದ ಕಡೆಯವರೆಗೂ ಯೆಹೂದಕ್ಕೆ ಒಂದು ಭಾಗ.


ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು