ಯೆಹೋಶುವ 15:13 - ಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.) ಅಧ್ಯಾಯವನ್ನು ನೋಡಿ |