ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಸೋಲಿಸಿ, ಯುದ್ಧದಲ್ಲಿ ಸೆಲ ದುರ್ಗವನ್ನು ವಶಪಡಿಸಿಕೊಂಡು, ಅದಕ್ಕೆ ಯೊಕ್ತೆಯೇಲ್ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
ಅನಂತರ ಅವರು, “ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಬಾರದವರು ಯಾರು?” ಎಂದರು. ಏಕೆಂದರೆ ಯೆಹೋವ ದೇವರ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆ ಇಟ್ಟುಕೊಂಡಿದ್ದರು.
ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿಯರ, ಹಿತ್ತಿಯರ, ಪೆರಿಜೀಯರ, ಯೆಬೂಸಿಯರ ಬಳಿಗೂ, ಮಿಚ್ಪಾ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿ ಕಳುಹಿಸಿದನು.