ಯೆಹೋಶುವ 15:8 - ಕನ್ನಡ ಸಮಕಾಲಿಕ ಅನುವಾದ8 ಅಲ್ಲಿಂದ ಯೆಬೂಸಿಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗನ್ನು ದಾಟಿ, ಉತ್ತರಕ್ಕಿರುವ ರೆಫಾಯಿಮ್ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕೆ ಬೆನ್ ಹಿನ್ನೋಮನ ತಗ್ಗಿನ ಮುಂದಿರುವ ಬೆಟ್ಟದ ಶಿಖರದವರೆಗೂ ಹೋಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬೆನ್ ಹಿನ್ನೋಮನ ಕಣಿವೆಗೆ ಹೊಗುತ್ತದೆ. ಅಲ್ಲಿಂದ ಅದು ಜೆರುಸಲೇಮ್ ನಗರವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲೂ ರೆಫಾಯೀಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗಿನ ಪಶ್ಚಿಮದಲ್ಲಿಯೂ ರೆಫಾಯೀಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಆ ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ. ಅಧ್ಯಾಯವನ್ನು ನೋಡಿ |