Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 16:1 - ಕನ್ನಡ ಸಮಕಾಲಿಕ ಅನುವಾದ

1 ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಉಂಟಾದ ಸೊತ್ತಿನ ವಿವರ: ಯೆರಿಕೋವಿನ ಬಳಿಯಲ್ಲಿರುವ ಯೊರ್ದನ್ ನದಿಯಿಂದ ಪೂರ್ವದಲ್ಲಿರುವ ಯೆರಿಕೋವಿನ ಜಲದವರೆಗೂ ಮತ್ತು ಬೇತೇಲಿನ ಬೆಟ್ಟಗಳವರೆಗೂ ಇರುವ ಮರುಭೂಮಿಯ ಮಾರ್ಗವಾಗಿ ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೋಸೆಫನ ವಂಶದವರಿಗೆ ದೊರಕಿದ ಆಸ್ತಿಪಾಸ್ತಿಯ ಎಲ್ಲೆಯು ಜೆರಿಕೋವಿನ ಬಳಿಯಲ್ಲಿ ಜೋರ್ಡನ್ ತೀರದಿಂದ ತೊಡಗಿ ಜೆರಿಕೋವಿನ ಪೂರ್ವದಲ್ಲಿದ್ದ ನದಿ, ಜೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಮಲೆನಾಡಿನ ಮರುಭೂಮಿ ಹಾಗೂ ಬೇತೇಲ್ ಇವುಗಳ ಮೇಲೆ ಲೂಜಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಸೇಫನ ವಂಶದವರಿಗೆ ದೊರಕಿದ ಸ್ವಾಸ್ತ್ಯದ ಮೇರೆಯು ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ತೊಡಗಿ ಯೆರಿಕೋವಿನ ಪೂರ್ವದಲ್ಲಿದ್ದ ಹಳ್ಳ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಸೇಫನ ಕುಟುಂಬದವರು ಈ ಸ್ವಾಸ್ತ್ಯವನ್ನು ಪಡೆದುಕೊಂಡರು. ಅವರ ಸ್ವಾಸ್ತ್ಯವು ಜೋರ್ಡನ್ ನದಿಯಿಂದ (ಜೆರಿಕೊ ಹತ್ತಿರ) ಆರಂಭವಾಗಿ ಜೆರಿಕೊವಿನ ಹಳ್ಳಗಳ ಉದ್ದಕ್ಕೂ ಮುಂದುವರೆದಿದೆ. (ಇದು ಜೆರಿಕೊವಿನ ಪೂರ್ವದಲ್ಲಿದೆ.) ಆ ಸೀಮೆಯು ಜೆರಿಕೊವಿನಿಂದ ಬೇತೇಲಿನ ಬೆಟ್ಟಪ್ರದೇಶಕ್ಕೆ ಮುಂದುವರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 16:1
10 ತಿಳಿವುಗಳ ಹೋಲಿಕೆ  

ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆನ ಮರುಭೂಮಿಗೆ ಮುಗಿಯುವುದು.


ಅವರ ಮುಂದೆ ಯೆಹೋಶುವನೂ ಇಸ್ರಾಯೇಲರೆಲ್ಲರೂ ಸೋತವರ ಹಾಗೆ ಮರುಭೂಮಿಯ ಮಾರ್ಗವಾಗಿ ಓಡಿಹೋದರು.


ಮರುಭೂಮಿಯಲ್ಲಿರುವ ಬೇತ್ ಅರಾಬಾ, ಮಿದ್ದೀನ್, ಸೆಕಾಕಾ,


ಹೀಗೆ ದಾವೀದನು ಬೇತೇಲಿನವರು, ನೆಗೆಬನ ರಾಮೋತನವರು ಹಾಗೂ ಯತ್ತೀರಿನವರು,


ರಾಹೇಲಳ ಪುತ್ರರು: ಯೋಸೇಫ್ ಮತ್ತು ಬೆನ್ಯಾಮೀನ್.


ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು.


ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.


ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಸಂಚರಿಸಿ ನೋಡಲು, ಯೋಸೇಫನ ಮನೆಯವರನ್ನು ಕಳುಹಿಸಲಾಯಿತು.


ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಎಫ್ರಾಯೀಮಿಗೆ ಒಂದು ಭಾಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು