ಯೆಹೋಶುವ 16:10 - ಕನ್ನಡ ಸಮಕಾಲಿಕ ಅನುವಾದ10 ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಕೆಲಸ ಮಾಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ. ಅಧ್ಯಾಯವನ್ನು ನೋಡಿ |