ಯೆಹೋಶುವ 16:5 - ಕನ್ನಡ ಸಮಕಾಲಿಕ ಅನುವಾದ5 ಅವರ ಕುಟುಂಬಗಳ ಪ್ರಕಾರ ಎಫ್ರಾಯೀಮ್ ಗೋತ್ರದ ಪ್ರದೇಶ ಹೀಗಿತ್ತು: ಪೂರ್ವದಿಕ್ಕಿನ ಅಟಾರೋತ್ ಅದ್ದಾರಿನಿಂದ ಪ್ರಾರಂಭಿಸಿ, ಮೇಲಿನ ಬೇತ್ ಹೋರೋನಿನವರೆಗೂ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಎಫ್ರಯಿಮ್ ಗೋತ್ರಗಳ ನಾಡಿನ ದಕ್ಷಿಣ ದಿಕ್ಕಿನ ಎಲ್ಲೆ ಆಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ತೊಡಗಿ ಮೇಲಿನ ಬೇತ್ ಹೋರೋನಿನ ಮೇಲೆ ಸಮುದ್ರ ತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. ಅದರ ಉತ್ತರ ದಿಕ್ಕಿನ ಎಲ್ಲೆ ಮಿಕ್ಮೆತಾತ್ ಎಂಬಲ್ಲಿ ತೊಡಗಿ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಎಫ್ರಾಯೀಮ್ ಗೋತ್ರಗಳ ದೇಶದ [ದಕ್ಷಿಣ ದಿಕ್ಕಿನ] ಮೇರೆಯು ಅಟಾರೋತದ್ದಾರಿನ ಪೂರ್ವದಿಕ್ಕಿನಿಂದ ತೊಡಗಿ ಮೇಲಿನ ಬೇತ್‍ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಗಿಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಎಫ್ರಾಯೀಮ್ ಕುಲದವರಿಗೆ ಕೊಟ್ಟ ಸ್ವಾಸ್ತ್ಯವು ಇಂತಿದೆ: ಅವರ ಸ್ವಾಸ್ತ್ಯದ ಪೂರ್ವದಿಕ್ಕಿನ ಸೀಮೆಯು ಮೇಲಿನ ಬೇತ್‌ಹೋರೋನಿನ ಹತ್ತಿರ ಇದ್ದ ಅಟಾರೋತದ್ದಾರಿನಿಂದ ಆರಂಭವಾಗುತ್ತದೆ. ಅಧ್ಯಾಯವನ್ನು ನೋಡಿ |