Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 16:9 - ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಎಫ್ರಾಯೀಮ್ ಹಾಗೂ ಮನಸ್ಸೆ ಗೋತ್ರದವರ ಮಧ್ಯೆ ಕೊಡಲಾದ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಪ್ರತ್ಯೇಕವಾಗಿ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಲ್ಲದೆ, ಎಫ್ರಯಿಮ್ ಕುಲದವರಿಗೆ ಮನಸ್ಸೆ ಕುಲದವರ ಮಧ್ಯೆ ಪ್ರತ್ಯೇಕವಾದ ಕೆಲವು ನಗರಗಳೂ ಅವಕ್ಕೆ ಸೇರಿದ ಗ್ರಾಮಗಳೂ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಎಫ್ರಾಯೀಮ್ ಕುಲದವರಿಗೆ ಮನಸ್ಸೆಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಫ್ರಾಯೀಮಿನ ಹಲವಾರು ಗಡಿಯ ಗ್ರಾಮಗಳು ಮನಸ್ಸೆ ಕುಲದವರ ಪ್ರದೇಶದೊಳಗೆ ಸೇರಿಕೊಂಡಿದ್ದವು. ಆದರೂ ಎಫ್ರಾಯೀಮ್ ಜನರು ಆ ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ತಮ್ಮ ಸ್ವತ್ತಾಗಿ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 16:9
6 ತಿಳಿವುಗಳ ಹೋಲಿಕೆ  

ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದುಹೋಗುವುದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯೀಮನದಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ಹೋಗಿರುವುದು.


ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಮೆಡಿಟೆರೆನಿಯನ್ ಸಮುದ್ರದವರೆಗೆ ಮುಗಿಯುವುದು. ಇದು ಎಫ್ರಾಯೀಮನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರವೇ ದೊರೆತ ಸೊತ್ತು.


ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.


ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.


ಅವರ ವಶಪಡಿಸಿಕೊಂಡು ನಿವಾಸಮಾಡಿದ ಬೇತೇಲೂ, ಅದರ ಗ್ರಾಮಗಳೂ ಪೂರ್ವದಿಕ್ಕಿನಲ್ಲಿ ನಾರಾನನೂ, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್, ಅದರ ಗ್ರಾಮಗಳೂ ಒಳಗೊಂಡಿತ್ತು; ಶೆಕೆಮ್, ಅಯ್ಯಾ ಪಟ್ಟಣಗಳೂ ಅದರ ಗ್ರಾಮಗಳೂ ಇವೇ.


ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಎಫ್ರಾಯೀಮಿಗೆ ಒಂದು ಭಾಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು