ಯೆಹೋಶುವ 17:14 - ಕನ್ನಡ ಸಮಕಾಲಿಕ ಅನುವಾದ14 ಯೋಸೇಫನ ಸಂತತಿಯರು ಯೆಹೋಶುವನಿಗೆ, “ಯೆಹೋವ ದೇವರು ನಮ್ಮನ್ನು ಈವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ, ನಾವು ಮಹಾ ಜನಾಂಗವಾಗಿದ್ದೇವೆ. ಹೀಗಿರುವಾಗ ನೀವು ನಮಗೆ ಸೊತ್ತಾಗಿ ಒಂದೇ ಒಂದು ಭಾಗವನ್ನು ಮಾತ್ರ ಪಾಲನ್ನಾಗಿ ಕೊಟ್ಟಿದ್ದು ಏಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಯೋಸೇಫ್ಯರು ಯೆಹೋಶುವನಿಗೆ - ನೀನು ಚೀಟುಹಾಕಿ ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿದ್ದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೋಸೇಫನ ವಂಶಸ್ಥರು ಯೆಹೋಶುವನೊಂದಿಗೆ ಮಾತನಾಡಿ, “ನೀನು ನಮಗೆ ಸ್ವಾಸ್ತ್ಯದ ಒಂದು ಕ್ಷೇತ್ರವನ್ನು ಮಾತ್ರ ಕೊಟ್ಟಿರುವೆ. ಆದರೆ ನಾವು ಬಹಳ ಜನರಿದ್ದೇವೆ. ಯೆಹೋವನು ತನ್ನ ಜನರಿಗೆ ಕೊಟ್ಟ ಈ ದೇಶದಲ್ಲಿ ನೀನು ನಮಗೆ ಕೇವಲ ಒಂದು ಭಾಗವನ್ನು ಮಾತ್ರ ಏಕೆ ಕೊಟ್ಟೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |