ಯೆಹೋಶುವ 17:16 - ಕನ್ನಡ ಸಮಕಾಲಿಕ ಅನುವಾದ16 ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್‌ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ಮತ್ತೆ ಯೆಹೋಶುವನಿಗೆ , “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ತಿರಿಗಿ ಯೆಹೋಶುವನಿಗೆ - ನಮ್ಮ ಪರ್ವತಪ್ರದೇಶವು ನಮಗೆ ಸಾಲುವದಿಲ್ಲ; ಬೇತ್‍ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ತಗ್ಗಿನಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸುವ ಕಾನಾನ್ಯರೆಲ್ಲರಿಗೆ ಕಬ್ಬಿಣದ ರಥಗಳಿವೆ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು. ಅಧ್ಯಾಯವನ್ನು ನೋಡಿ |