ಯೆಹೋಶುವ 17:3 - ಕನ್ನಡ ಸಮಕಾಲಿಕ ಅನುವಾದ3 ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ, ಹೇಫೆರನ ಮಗನೂ ಆದ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಆದರೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಪುತ್ರಿಯರು ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳ ಹೊರತು ಗಂಡು ಮಕ್ಕಳು ಇರಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಅವನ ಹೆಣ್ಣು ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಆಗಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣುಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಹುಟ್ಟಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ವಿುಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಚಲ್ಪಹಾದನು ಹೇಫೆರನ ಮಗನು, ಹೇಫೆರನು ಗಿಲ್ಯಾದನ ಮಗನು, ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಚಲ್ಪಹಾದನಿಗೆ ಗಂಡುಮಕ್ಕಳಿರಲಿಲ್ಲ. ಆದರೆ ಅವನಿಗೆ ಐದು ಜನ ಹೆಣ್ಣುಮಕ್ಕಳಿದ್ದರು. ಅವರ ಹೆಸರುಗಳು: ಮಹ್ಲಾ, ನೋಹಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ. ಅಧ್ಯಾಯವನ್ನು ನೋಡಿ |