Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:4 - ಕನ್ನಡ ಸಮಕಾಲಿಕ ಅನುವಾದ

4 ಇವರು ಯಾಜಕನಾದ ಎಲಿಯಾಜರನ ಬಳಿಗೂ ನೂನನ ಮಗ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆ, “ನಮ್ಮ ಸಹೋದರರಲ್ಲಿ ನಮಗೂ ಸೊತ್ತನ್ನು ಕೊಡುವಂತೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರು,” ಎಂದರು. ಆದ್ದರಿಂದ ಅವರ ತಂದೆಗಳ ಸಹೋದರರ ಜೊತೆಗೆ ಅವರಿಗೂ ಯೆಹೋವ ದೇವರ ವಾಕ್ಯದ ಪ್ರಕಾರ ಸೊತ್ತನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ, ಕುಲಾಧಿಪತಿಗಳು ಇವರ ಬಳಿಗೆ ಬಂದು - ನಮ್ಮ ಅಣ್ಣತಮ್ಮಂದಿರ ಮಧ್ಯದಲ್ಲಿ ನಮಗೆ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದನಲ್ಲಾ ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಮಧ್ಯದಲ್ಲಿ ಸ್ವಾಸ್ತ್ಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:4
9 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಯಾಜಕನಾದ ಎಲಿಯಾಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಮುಖ್ಯಸ್ಥರೂ ಜನರಿಗೆ ಸೊತ್ತಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲರು ಬಾಧ್ಯವಾಗಿ ಪ್ರದೇಶಗಳನ್ನು ಹೊಂದಿದರು.


ಯೊರ್ದನ್ ನದಿ ಆಚೆಯಲ್ಲಿರುವ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳ ಜೊತೆಗೆ ಮನಸ್ಸೆಗೆ ಬಿದ್ದ ಚೀಟಿನಲ್ಲಿ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.


ಯೋಸೇಫನ ಮಗನಾದ ಮನಸ್ಸೆಯ ಕುಟುಂಬಗಳಿಗೆ ಸೇರಿದ ಚಲ್ಪಹಾದ ಎಂಬುವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫೆರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಪುತ್ರಿಯರಿದ್ದರು.


ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾದನ ಪುತ್ರಿಯರು ಮಾಡಿದರು.


ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು