Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:1 - ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:1
26 ತಿಳಿವುಗಳ ಹೋಲಿಕೆ  

ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು.


ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು.


ಅವರು ಕಾನಾನ್ ದೇಶದ ಶೀಲೋವಿನಲ್ಲಿ ಅವರನ್ನು ಸಂಧಿಸಿ, “ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ್ದಾರೆ,” ಎಂದರು.


ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು.


ತಮ್ಮ ವೈರಿಗಳನ್ನು ದಂಡಿಸಿದರು. ನಿತ್ಯನಿಂದೆಯೇ ಅವರ ಪಾಲಾಯಿತು.


“ನೀನು ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ನೀನೆದ್ದು, ವೇಷಹಾಕಿಕೊಂಡು ಶೀಲೋವಿಗೆ ಹೋಗು. ‘ಈ ಜನರ ಮೇಲೆ ಅರಸನಾಗಿರುವೆ,’ ಎಂದು ನನಗೆ ಹೇಳಿದ ಪ್ರವಾದಿ ಅಹೀಯನು ಅಲ್ಲಿದ್ದಾನೆ.


ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.


ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು.


ದೇವರ ಮನೆ ಶೀಲೋವಿನಲ್ಲಿ ಇರುವ ಮಟ್ಟಿಗೂ, ಅವರು ಮೀಕನು ಮಾಡಿದ ವಿಗ್ರಹವನ್ನು ಇಟ್ಟುಕೊಂಡಿದ್ದರು.


ಯಾರೊಬ್ಬಾಮನ ಪತ್ನಿಯು ಹಾಗೆಯೇ ಮಾಡಿ, ಎದ್ದು ಶೀಲೋವಿಗೆ ಹೋಗಿ, ಅಹೀಯನ ಮನೆಗೆ ಬಂದಳು. ಆದರೆ ಅಹೀಯನಿಗೆ ಕಾಣಿಸಲಿಲ್ಲ, ವೃದ್ದಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿ ಹೋಗಿದ್ದವು.


ಅವರು ಬೇತೇಲಿಗೆ ಉತ್ತರದಲ್ಲಿಯೂ, ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವ ದೇವರ ಹಬ್ಬವುಂಟೆಂದು ಹೇಳಿದರು.


ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.


ಆದರೆ ಇಸ್ರಾಯೇಲರಲ್ಲಿ ತಮ್ಮ ಬಾಧ್ಯತೆಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.


ಆ ಮನುಷ್ಯರು ನಾಡನ್ನು ಅಳತೆ ಮಾಡುವುದಕ್ಕಾಗಿ ಹೊರಟು ಹೋಗುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ನೀವು ಹೋಗಿ ದೇಶವೆಲ್ಲಾ ಸಂಚರಿಸಿ, ಅದನ್ನು ಅಳತೆಮಾಡಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ನಾನು ಇಲ್ಲಿ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ನಿಮಗೆ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ಬನ್ನಿರಿ,” ಎಂದು ಅಪ್ಪಣೆಕೊಟ್ಟನು.


ಇಸ್ರಾಯೇಲರು ಅದನ್ನು ಕೇಳಿದಾಗ, ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಶೀಲೋವಿನಲ್ಲಿ ಕೂಡಿದರು.


ನಿಶ್ಚಯವಾಗಿ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.


ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ.


ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು.


ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.


ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.


ದೇಶವು ಯೆಹೋವ ದೇವರ ಮುಂದೆ ವಶವಾದ ತರುವಾಯ, ನೀವು ಯೆಹೋವ ದೇವರ ಮತ್ತು ಇಸ್ರಾಯೇಲರ ದೃಷಿಯಲ್ಲಿ ನಿರಪರಾಧಿಗಳಾಗಿದ್ದು, ಈ ದೇಶವು ಯೆಹೋವ ದೇವರ ಮುಂದೆ ನಿಮ್ಮ ಸೊತ್ತಾಗುವುದು.


ನೀವು ಸ್ವಾಧೀನಪಡಿಸುವ ನಾಡು ಅಶುದ್ಧವಾಗಿದ್ದರೆ, ಯೆಹೋವ ದೇವರ ಗುಡಾರವಿರುವ ಯೆಹೋವ ದೇವರ ನಾಡಿಗೆ ನೀವು ಬಂದು, ನಮ್ಮ ಮಧ್ಯದಲ್ಲಿ ಸೊತ್ತನ್ನು ತೆಗೆದುಕೊಳ್ಳಿರಿ. ಯೆಹೋವ ದೇವರ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವುದರಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿ ಬೀಳಬೇಡಿರಿ. ನಮಗೆ ವಿರೋಧವಾಗಿಯೂ ತಿರುಗಿ ಬೀಳಬೇಡಿರಿ.


ಹಾಗೆಯೇ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡರು. ಅವರು ಯಾವುದೇ ಪುರುಷರೊಂದಿಗೆ ಸಂಬಂಧ ಹೊಂದಿರಲಿಲ್ಲ. ಅವರನ್ನು ಕಾನಾನ್ ದೇಶದಲ್ಲಿರುವ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು