Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:12 - ಕನ್ನಡ ಸಮಕಾಲಿಕ ಅನುವಾದ

12 ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆನ ಮರುಭೂಮಿಗೆ ಮುಗಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯಿಂದ ತೊಡಗಿ ಜೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿಂದ ಪಶ್ಚಿಮಕ್ಕೆ ಹೋಗಿ, ದಿಣ್ಣೆ ಹತ್ತಿ ಬೆತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆಯಿಂದ ತೊಡಗಿ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬೈಲಿನಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:12
11 ತಿಳಿವುಗಳ ಹೋಲಿಕೆ  

ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಉಂಟಾದ ಸೊತ್ತಿನ ವಿವರ: ಯೆರಿಕೋವಿನ ಬಳಿಯಲ್ಲಿರುವ ಯೊರ್ದನ್ ನದಿಯಿಂದ ಪೂರ್ವದಲ್ಲಿರುವ ಯೆರಿಕೋವಿನ ಜಲದವರೆಗೂ ಮತ್ತು ಬೇತೇಲಿನ ಬೆಟ್ಟಗಳವರೆಗೂ ಇರುವ ಮರುಭೂಮಿಯ ಮಾರ್ಗವಾಗಿ ಹೋಗಿತ್ತು.


ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು.


ಬೇತಾವೆನಿನ ಬಸವ ವಿಗ್ರಹಕ್ಕೆ ಸಮಾರ್ಯದ ನಿವಾಸಿಗಳು ಭಯಪಡುವರು. ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. ಅದರ ಯಾಜಕರು ನಡುಗುವರು. ಏಕೆಂದರೆ ಅದರ ವೈಭವವು ಅದರಿಂದ ಕುಂದಿಹೋಯಿತು.


“ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.


“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.


ಆಗ ಯೆರಿಕೋವಿನ ಜನರು ಇಸ್ರಾಯೇಲರ ನಿಮಿತ್ತವಾಗಿ, ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದರು.


ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು.


ಅವರ ಮುಂದೆ ಯೆಹೋಶುವನೂ ಇಸ್ರಾಯೇಲರೆಲ್ಲರೂ ಸೋತವರ ಹಾಗೆ ಮರುಭೂಮಿಯ ಮಾರ್ಗವಾಗಿ ಓಡಿಹೋದರು.


ಬೆನ್ಯಾಮೀನನ ಸಂತತಿಯವರಿಗೆ ಅವರ ಕುಟುಂಬಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಸೊತ್ತು ಯೆಹೂದ ಮತ್ತು ಯೋಸೇಫನ ಗೋತ್ರದವರ ಪ್ರಾಂತಗಳಿಗೆ ನಡುವೆಯಿತ್ತು.


ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು