Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:4 - ಕನ್ನಡ ಸಮಕಾಲಿಕ ಅನುವಾದ

4 ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ. ನಾನು ಅವರನ್ನು ಕಳುಹಿಸುವೆನು. ಅವರು ಎದ್ದು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯತೆಗಳ ಪ್ರಕಾರ ಅದನ್ನು ಅಳತೆಮಾಡಿ ವಿವರವಾಗಿ ಬರೆಯಲಿ. ತರುವಾಯ ನನ್ನ ಬಳಿಗೆ ಅವರು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರತಿಯೊಂದು ಕುಲದಿಂದ ಮೂರುಮೂರು ಮಂದಿಯನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ನಾಡಿನಲ್ಲೆಲ್ಲಾ ಸಂಚಾರಮಾಡಿ ತಮ್ಮ ತಮ್ಮ ಕುಲಗಳಿಗನುಸಾರ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇವಿುಸಿರಿ; ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ಆರಿಸಬೇಕು. ಭೂಮಿಯನ್ನು ಪರಿಶೀಲಿಸಲು ನಾನು ಅವರನ್ನು ಕಳುಹಿಸುತ್ತೇನೆ. ಅವರು ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಅದರ ನಕ್ಷೆಯನ್ನು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:4
9 ತಿಳಿವುಗಳ ಹೋಲಿಕೆ  

ಆ ಮನುಷ್ಯರು ಆ ನಾಡಿಗೆ ಹೋಗಿ, ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಗ್ರಂಥದಲ್ಲಿ ಬರೆದುಕೊಂಡು ಶೀಲೋವಿನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರುಗಿ ಬಂದರು.


ನೀವು ದೇಶವನ್ನು ಏಳು ಪಾಲಾಗಿ ವಿತರಿಸಬೇಕು ಮತ್ತು ಅದರ ವಿವರಗಳನ್ನು ಇಲ್ಲಿ ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಮಗಾಗಿ ಚೀಟುಗಳನ್ನು ಹಾಕುವೆನು.


ಯೆಹೋಶುವನು ಇಸ್ರಾಯೇಲರಿಗೆ, “ನಿಮ್ಮ ತಂದೆಗಳ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಎಷ್ಟರವರೆಗೆ ಆಲಸ್ಯ ಮಾಡುವಿರಿ?


“ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಮಂದಿ ಗಂಡಸರನ್ನು ಆರಿಸಿಕೊಂಡು,


ಆದ್ದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬರಾಗಿ ತೆಗೆದುಕೊಳ್ಳಿರಿ.


“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಜನರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು,” ಎಂದರು.


ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ.


ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು.


ಆದ್ದರಿಂದ ಚೀಟುಹಾಕಿ ದೇಶವನ್ನು ಹಂಚುವದಕ್ಕೆ ಯೆಹೋವ ದೇವರ ಸಭೆಯಲ್ಲಿ ನಿನಗೆ ಯಾರೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು