Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:22 - ಕನ್ನಡ ಸಮಕಾಲಿಕ ಅನುವಾದ

22 ಆ ಎಲ್ಲೆಯು ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳಿಗೆ ಸೇರಿ ಯೊರ್ದನ್ ನದಿ ತೀರದಲ್ಲಿ ಮುಗಿಯುತ್ತದೆ. ಅಲ್ಲಿ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತಾಬೋರ್, ಶಹಚೀಮಾ, ಬೇತ್‌ಷೆಮೆಷ್‌ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಈ ಮೇರೆಯು ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತಾಬೋರ್, ಶಹಚೀಮಾ, ಬೇತ್‍ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ಹೊಳೆಯ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವರ ಭೂಮಿಯ ಮೇರೆಯು ತಾಬೋರ್, ಶಹಚೀಮಾ, ಬೇತ್‌ಷೆಮೆಷ್ ಎಂಬ ಊರುಗಳನ್ನು ತಲುಪಿತ್ತು. ಆ ಸೀಮೆಯು ಜೋರ್ಡನ್ ನದಿಗೆ ಮುಕ್ತಾಯಗೊಳ್ಳುತ್ತಿತ್ತು. ಒಟ್ಟಿನಲ್ಲಿ ಹದಿನಾರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳು ಇದರಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:22
14 ತಿಳಿವುಗಳ ಹೋಲಿಕೆ  

ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.


ಮೆರಾರೀಯ ಉಳಿದ ಮಕ್ಕಳಿಗೂ, ಜೆಬುಲೂನನ ಗೋತ್ರದಿಂದ ರಿಮ್ಮೋನೋ, ಅದರ ಉಪನಗರಗಳೂ, ತಾಬೋರ್, ಅದರ ಉಪನಗರಗಳೂ;


ಬೆನ್ ಡೆಕೆರ್ ಮಾಕಾಚ್, ಶಾಲ್ಬೀಮ್, ಬೇತ್ ಷೆಮೆಷ್, ಏಲೋನ್ ಹಾಗು ಬೇತ್ ಹಾನಾನ್‌ಗಳಲ್ಲಿ ಅಧಿಕಾರಿ.


ಆಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಆ ಎರಡು ಗೋತ್ರಗಳಿಂದ ಈ ಒಂಬತ್ತು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.


ಇರೋನ್, ಮಿಗ್ದಲ್ ಎಲ್, ಹೊರೇಮ್, ಬೇತ್ ಅನಾತ್ ಹಾಗೂ ಬೇತ್ ಷೆಮೆಷ್. ಮೊದಲಾದ ಹತ್ತೊಂಬತ್ತು ಕೋಟೆಪಟ್ಟಣಗಳೂ, ಅವುಗಳ ಗ್ರಾಮಗಳು.


ಅದು ಸಾರೀದಿನಿಂದ ಸೂರ್ಯನು ಉದಯಿಸುವ ಪೂರ್ವದಿಕ್ಕಿನ ಕಿಸ್ಲೋತ್ ತಾಬೋರಿನ ಮೇರೆಗೆ ತಿರುಗಿ, ಅಲ್ಲಿಂದ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.


ರೆಮೆತ್, ಏಂಗನ್ನೀಮ್, ಏನ್ ಹದ್ದಾ, ಬೇತ್ ಪಚ್ಚೇಚ್ ಎಂಬ ತೀರಗಳನ್ನು ಒಳಗೊಂಡಿತ್ತು.


ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ, ಅವುಗಳ ಗ್ರಾಮಗಳೂ ಅವರಿಗೆ ದೊರೆತ ಪಾಲು.


ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟದಲ್ಲಿ ಏರಿದನೆಂದು ಸೀಸೆರನಿಗೆ ತಿಳಿಸಲಾಯಿತು.


ಗೇರ್ಷೋಮನ ಪುತ್ರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ ಹದಿಮೂರು ಪಟ್ಟಣಗಳು ದೊರಕಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು