Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:26 - ಕನ್ನಡ ಸಮಕಾಲಿಕ ಅನುವಾದ

26 ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲ್, ಶೀಹೋರ್ ಲಿಬ್ನತ್ ಕಡೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲಮ್ಮೆಲೆಕ್, ಅಮಾದ್, ಮಿಷಾಲ್. ಇವರ ನಾಡಿನ ಎಲ್ಲೆ ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಲಮ್ಮೆಲೆಕ್, ಅಮಾದ್, ವಿುಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಗುಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲಮ್ಮೆಲೆಕ್, ಅಮಾದ್ ಮತ್ತು ಮಿಷಾಲ್. ಇದರ ಪಶ್ಚಿಮ ಮೇರೆಯು ಕರ್ಮೆಲ್ ಬೆಟ್ಟ ಮತ್ತು ಶೀಹೋರ್‌ಲಿಬ್ನತ್‌ವರೆಗೆ ಚಾಚಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:26
15 ತಿಳಿವುಗಳ ಹೋಲಿಕೆ  

ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ನಿನ್ನ ತಲೆಯು ಕರ್ಮೆಲ್ ಬೆಟ್ಟದಂತೆ ವೈಭವ. ನಿನ್ನ ತಲೆಕೂದಲು ಧೂಮ್ರ ಬಣ್ಣದ ಹಾಗೆ ಇದೆ. ಹೆಣೆದ ಆ ಜಡೆಯಿಂದ ಅರಸನಿಗೂ ಆಕರ್ಷಣ.


ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.


ಹೀಗೆ ಅಹಾಬನು ಇಸ್ರಾಯೇಲರೆಲ್ಲರನ್ನೂ ಕರೆಯಿಸಿ, ಕರ್ಮೆಲು ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.


“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.


ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.


ಆಶೇರನ ಗೋತ್ರದಿಂದ ಮಷಾಲ್, ಅಬ್ದೋನ್


ಸಮುಯೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಅವನಿಗೆ ಹೀಗೆ ಹೇಳಲಾಗಿತ್ತು, “ಸೌಲನು ತನ್ನ ನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲು ಕರ್ಮೆಲಿಗೆ ಹೋಗಿದ್ದಾನೆ. ನಂತರ ಅಲ್ಲಿಂದ ಮುಂದೆ ಹೋಗಿ ಗಿಲ್ಗಾಲಿಗೆ ಹೋಗಿದ್ದಾನೆ.”


ಆಶೇರನ ಗೋತ್ರದ ಸೊತ್ತಿನಿಂದ ಮಿಷಾಲನ್ನೂ, ಅಬ್ದೋನನ್ನೂ


ಅವರ ಮೇರೆ: ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,


ಅಲ್ಲಿಂದ ಪೂರ್ವದ ಕಡೆಯಾಗಿ ಬೇತ್‌ದಾಗೋನಿಗೆ ತಿರುಗುತ್ತದೆ. ಅನಂತರ ಜೆಬುಲೂನಿಗೂ ಬೇತ್ ಏಮೆಕಿಗೆ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಯೇಲ್ ತಗ್ಗಿಗೂ ನೆಗೀಯೇಲ್ ಕಡೆ ಹಾದು, ಎಡಭಾಗದಲ್ಲಿರುವ ಕಾಬೂಲ್ ಕಡೆ ಮುಂದುವರೆಯುತ್ತದೆ.


ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.


ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಸಮಾರ್ಯಕ್ಕೆ ಇಳಿದು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು