Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:28 - ಕನ್ನಡ ಸಮಕಾಲಿಕ ಅನುವಾದ

28 ಅಲ್ಲಿಂದ ಅಬ್ದೋನ್, ರೆಹೋಬ್, ಹಮ್ಮೋನ್, ಕಾನಾ ಹಾಗೂ ಸೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಸಿದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಲ್ಲಿಂದ ಆ ಮೇರೆಯು ಎಬ್ರೋನ್, ರೆಹೋಬ್, ಹಮ್ಮೋನ್ ಮತ್ತು ಕಾನಾ ಇವುಗಳ ಮೂಲಕ ಚೀದೋನ್ ಎಂಬ ಮಹಾನಗರಕ್ಕೆ ತಲುಪಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:28
15 ತಿಳಿವುಗಳ ಹೋಲಿಕೆ  

ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.


ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು.


ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ತಿರುಗಿ ಬಂದರು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.


“ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ. “ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು. ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.”


ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ. ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ: “ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ, ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,”


ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಸೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ ಮೌನವಾಗಿರಿ.


ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.


ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.


ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.


ಹೆಲ್ಕತನ್ನೂ ರೆಹೋಬನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ಅದು ಸೀದೋನಿಗೆ ದೂರವಾಗಿದ್ದುದರಿಂದಲೂ, ಯಾವ ಮನುಷ್ಯನ ಸಂಗಡಲಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ಅವರನ್ನು ಕಾಪಾಡಲು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸಮೀಪವಾದ ತಗ್ಗಿನಲ್ಲಿ ಇತ್ತು. ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.


ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.


“ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು