Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:30 - ಕನ್ನಡ ಸಮಕಾಲಿಕ ಅನುವಾದ

30 ಅದಕ್ಕೆ ಉಮ್ಮಾ, ಅಫೇಕ್ ಮತ್ತು ರೆಹೋಬ್ ಒಟ್ಟು ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಉಮ್ಮಾ, ಅಫೇಕ್‌, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಉಮ್ಮಾ, ಅಫೇಕ್, ರೆಹೂಬ್ ಇವೇ ಮೊದಲಾದ ಇಪ್ಪತ್ತೆರಡು ನಗರಗಳೂ ಅವುಗಳ ಗ್ರಾಮಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಉಮ್ಮಾ, ಅಫೇಕ್, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಉಮ್ಮಾ, ಅಫೇಕ್ ಮತ್ತು ರೆಹೋಬ್ ಹತ್ತಿರ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಿನಲ್ಲಿ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಇದರಲ್ಲಿ ಸೇರಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:30
12 ತಿಳಿವುಗಳ ಹೋಲಿಕೆ  

ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.


ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.


ಹೆಲ್ಕತನ್ನೂ ರೆಹೋಬನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ಅಲ್ಲಿಂದ ಅಬ್ದೋನ್, ರೆಹೋಬ್, ಹಮ್ಮೋನ್, ಕಾನಾ ಹಾಗೂ ಸೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಸೀದೋನ್ಯರ ಆರಾ ಪ್ರದೇಶದಿಂದ ಅಫೇಕ್ ಮತ್ತು ಅಮೋರಿಯರ ಮೇರೆಯವರೆಗೆ ಕಾನಾನ್ಯರ ಎಲ್ಲಾ ದೇಶವು,


ಅಫೇಕದ ಅರಸನು. ಲಷ್ಷಾರೋನಿನ ಅರಸನು.


ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗ ಗದ್ದೀ,


ಅಲ್ಲಿಂದ ರಾಮಾ, ಟೈರ್ ಎಂಬ ಕೋಟೆಪಟ್ಟಣದವರೆಗೂ ಹೋಗುತ್ತದೆ. ಅಲ್ಲಿಂದ ಹೋಸಾ ಕಡೆ ಹೊರಟು ಮೆಡಿಟೆರಿಯನ್ ಸಮುದ್ರದ ಬಳಿ ಅಕ್ಜೀಬ್ ಮೇರೆಯ ಅಂಚಿಗೆ ಮುಗಿಯುತ್ತದೆ.


ಇದೇ ಆಶೇರನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ.


ಫಿಲಿಷ್ಟಿಯರು ತಮ್ಮ ಸಮಸ್ತ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿಕೊಂಡರು. ಹಾಗೆಯೇ ಇಸ್ರಾಯೇಲರು ಇಜ್ರೆಯೇಲ್ ಎಂಬ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.


ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.


“ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು