ಯೆಹೋಶುವ 19:33 - ಕನ್ನಡ ಸಮಕಾಲಿಕ ಅನುವಾದ33 ಅವರ ಮೇರೆಯು ಹೆಲೇಫ್ ಮತ್ತು ಚಾನನ್ನೀಮ್ ಎಂಬ ಕಡೆಯಲ್ಲಿ ಇರುವ ಅಲ್ಲೋನ್ ಮರದಿಂದ, ಆದಾಮಿ ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮ್ ತನಕ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಗಿಯುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಚಾನನ್ನೀಮಿನಲ್ಲಿರುವ ಹೆಲೇಫಿನ ಅಲ್ಲೋನ ಮರದಿಂದ ಆದಾಮಿನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಚಾನನ್ನೀಮಿನಲ್ಲಿರುವ ಹೇಲೆಫಿನ ಅಲ್ಲೋನ್ ಮರದಿಂದ ತೊಡಗಿ ಅದಾಮೀನೆಕೆಬ್, ಯೆಬ್ನೆಯೇಲ್ ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಚಾನನ್ನೀವಿುನಲ್ಲಿರುವ ಹೇಲೆಫಿನ ಅಲ್ಲೋನ್ ಮರದಿಂದ ತೊಡಗಿ ಅದಾಮೀನೆಕೆಬ್; ಯಬ್ನೆಯೇಲ್ ಇವುಗಳ ಮೇಲೆ ಲಕ್ಕೂವಿುಗೆ ಹೋಗಿ ಯೊರ್ದನ್ ಹೊಳೆಯ ತೀರದಲ್ಲಿ ಮುಗಿಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವರ ಭೂಮಿಯ ಮೇರೆಯು ಚಾನನ್ನೀಮಿನ ಹತ್ತಿರ ಇರುವ ದೊಡ್ಡ ಮರದಿಂದ ಆರಂಭವಾಗುತ್ತದೆ. ಇದು ಹೇಲೆಫಿನ ಹತ್ತಿರ ಇದೆ. ಬಳಿಕ ಆ ಮೇರೆಯು ಅದಾಮೀನೆಕೆಬ್ ಮತ್ತು ಯಬ್ನೆಯೇಲ್ ಇವುಗಳ ಮೂಲಕ ಲಕ್ಕೂಮಿಗೆ ಹೋಗಿ, ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಂಡಿತು. ಅಧ್ಯಾಯವನ್ನು ನೋಡಿ |