Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:35 - ಕನ್ನಡ ಸಮಕಾಲಿಕ ಅನುವಾದ

35 ಇದರಲ್ಲಿರುವ ಕೋಟೆಗಳುಳ್ಳ ಪಟ್ಟಣಗಳು ಯಾವುವೆಂದರೆ: ಜಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಚಿದ್ದೀಮ್, ಚೇರ್, ಹಮ್ಮತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಈ ಸೀಮೆಯ ಒಳಗಡೆ ಕೆಲವು ಅತಿ ಭದ್ರವಾದ ಪಟ್ಟಣಗಳಿದ್ದವು. ಆ ಪಟ್ಟಣಗಳೆಂದರೆ: ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:35
14 ತಿಳಿವುಗಳ ಹೋಲಿಕೆ  

ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೆತಿಗೆ ದಕ್ಷಿಣಕ್ಕಿರುವ ಬಯಲಿನಲ್ಲಿಯೂ ಕಣಿವೆಗಳಲ್ಲಿ ಮತ್ತು ಪಶ್ಚಿಮದಲ್ಲಿ ದೋರಿನ ಪ್ರಾಂತಗಳಲ್ಲಿ ಇರುವ ಅರಸರಿಗೂ


ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.


ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.


ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು.


ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು.


ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು


ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.


ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು.


ಆ ಮೇರೆಯು ಪಶ್ಚಿಮಕ್ಕೆ ಅಜ್ನೋತ್ ತಾಬೋರ್ ಕಡೆಗೆ ತಿರುಗಿ, ಅಲ್ಲಿಂದ ಹುಕ್ಕೋಕ್ ಹೊರಟು, ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನ್ನೂ ಮತ್ತು ಯೆಹೂದಿಯರ ಮೇರೆಗೂ ಪೂರ್ವದಿಕ್ಕಿನಲ್ಲಿ ಯೊರ್ದನ್ ನದಿಯನ್ನು ಮುಟ್ಟಿ ಬರುವುದು.


ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.


ನಫ್ತಾಲಿಯ ಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಹಮ್ಮೋತ್ ದೋರನ್ನೂ ಕರ್ತಾನನ್ನೂ ಹೀಗೆ ಮೂರು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು