Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:47 - ಕನ್ನಡ ಸಮಕಾಲಿಕ ಅನುವಾದ

47 ಇದಲ್ಲದೆ ದಾನನ ಗೋತ್ರದ ಮೇರೆಯು ಅವರಿಗೆ ಸಾಲದ್ದರಿಂದ ಅವರು ಹೊರಟುಹೋಗಿ ಲೆಷೆಮಿನ ಮೇಲೆ ಖಡ್ಗದಿಂದ ಯುದ್ಧಮಾಡಿ, ಅದನ್ನು ಸೋಲಿಸಿ, ಸ್ವಾಧೀನಮಾಡಿಕೊಂಡರು. ಅವರು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿದರು. ಆ ಜನರನ್ನು ಕತ್ತಿಯಿಂದ ಸಂಹರಿಸಿ ಅವರ ನಗರವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಅಲ್ಲದೆ, ಅದಕ್ಕೆ ತಮ್ಮ ಮೂಲ ಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ದಾನ್‍ಕುಲದವರು ತಮ್ಮ ಪ್ರಾಂತವನ್ನು ವಿಸ್ತರಿಸುವದಕ್ಕಾಗಿ ಹೊರಟು ಲೆಷೆವಿುನವರೊಡನೆ ಯುದ್ಧಮಾಡಿ ಜಯಿಸಿ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಮತ್ತು ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ದಾನ್‌ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವಲ್ಲಿ ಕಷ್ಟಪಡಬೇಕಾಯಿತು. ಅಲ್ಲಿ ಅವರಿಗೆ ಬಲಿಷ್ಠರಾದ ವೈರಿಗಳಿದ್ದರು. ದಾನ್ ಕುಲದವರು ಅವರನ್ನು ಸುಲಭವಾಗಿ ಸೋಲಿಸಲಾಗಲಿಲ್ಲ. ಆದ್ದರಿಂದ ಅವರು ಲೆಷೆಮ್ ಜನರೊಡನೆ ಯುದ್ಧಮಾಡಿ ಅವರನ್ನು ಸಂಹರಿಸಿ ಲೆಷೆಮ್ ಪಟ್ಟಣದಲ್ಲಿ ನೆಲೆಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:47
6 ತಿಳಿವುಗಳ ಹೋಲಿಕೆ  

ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪ ಊರಿಗೆ ಎದುರಾದ ಮೇರೆಯು ಸಹ ದೊರಕಿತು.


ಈ ಪಟ್ಟಣಗಳೂ, ಅವುಗಳ ಗ್ರಾಮಗಳೂ, ದಾನ್ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.


ಮೋಶೆಯು ದಾನನ ವಿಷಯವಾಗಿ ಹೇಳಿದ್ದೇನೆಂದರೆ: “ದಾನನು ಬಾಷಾನಿನಿಂದ ಹಾರಿಬರುವ, ಪ್ರಾಯದ ಸಿಂಹದಂತಿದ್ದಾನೆ.”


ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು