ಯೆಹೋಶುವ 19:50 - ಕನ್ನಡ ಸಮಕಾಲಿಕ ಅನುವಾದ50 ಅವನು ಕೇಳಿದ ಎಫ್ರಾಯೀಮ್ ಬೆಟ್ಟದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಯೆಹೋವ ದೇವರ ಆಜ್ಞೆಯ ಪ್ರಕಾರ ಕೊಟ್ಟರು. ಅವನು ಪಟ್ಟಣವನ್ನು ಕಟ್ಟಿಕೊಂಡು ಅಲ್ಲಿಯೇ ನೆಲೆಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅವನು ತನಗೋಸ್ಕರ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟು ಬಿಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿಕೊಂಡು ಅದರಲ್ಲೇ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಆತ ತನಗೋಸ್ಕರ ಎಫ್ರಯಿಮರ ಮಲೆನಾಡಿನಲ್ಲಿರುವ ‘ತಿಮ್ನತ್ ಸೆರಹ’ ಎಂಬ ನಗರವನ್ನು ಕೇಳಿಕೊಂಡನು. ಸರ್ವೇಶ್ವರನ ಆಜ್ಞೆಯಂತೆ ಅವರು ಅದನ್ನು ಅವನಿಗೆ ಕೊಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿ ಅದರಲ್ಲೇ ವಾಸಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಅವನು ತನಗೋಸ್ಕರ ಎಫ್ರಾಯೀಮ್ಯರ ಪರ್ವತ ಪ್ರದೇಶದಲ್ಲಿರುವ ತಿಮ್ನತ್‍ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟುಬಿಟ್ಟರು. ಅವನು ಅದನ್ನು ಕಟ್ಟಿಕೊಂಡು ಅದರಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಆ ಭೂಮಿಯನ್ನು ಕೊಡಬೇಕೆಂಬುದು ಯೆಹೋವನ ಆಜ್ಞೆಯಾಗಿತ್ತು. ಆದ್ದರಿಂದ ಅವರು ಯೆಹೋಶುವನ ಅಪೇಕ್ಷೆಯಂತೆ ಎಫ್ರಾಯೀಮ್ಯರ ಬೆಟ್ಟಪ್ರದೇಶದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಅವನಿಗೆ ಕೊಟ್ಟರು. ಯೆಹೋಶುವನು ಆ ಪಟ್ಟಣವನ್ನು ಭದ್ರಗೊಳಿಸಿ ಅಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿ |