ಯೆಹೋಶುವ 19:9 - ಕನ್ನಡ ಸಮಕಾಲಿಕ ಅನುವಾದ9 ಸಿಮೆಯೋನನ ಗೋತ್ರದವರಿಗೆ ಬಾಧ್ಯತೆ ಯೆಹೂದ ಗೋತ್ರದವರ ಭಾಗದಿಂದ ಸಿಕ್ಕಿತು. ಏಕೆಂದರೆ ಯೆಹೂದ ಗೋತ್ರದ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ, ಸಿಮೆಯೋನನ ಗೋತ್ರದವರು ಯೆಹೂದ ಗೋತ್ರದವರ ಎಲ್ಲೆಯ ಒಳಗಿಂದಲೇ ತಮ್ಮ ಪಾಲನ್ನು ಹೊಂದಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಆಸ್ತಿ ಯೂದವಂಶದ ಆಸ್ತಿಯಲ್ಲಿ ಒಂದು ಭಾಗ. ಯೂದವಂಶದವರಿಗೆ ದೊರಕಿದ ಪ್ರದೇಶ ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೆ ಅದರಲ್ಲೆ ಪಾಲು ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಸ್ವಾಸ್ತ್ಯವು ಯೆಹೂದ್ಯರ ಸ್ವಾಸ್ತ್ಯದ ಒಂದು ಭಾಗ. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲುಸಿಕ್ಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸಿಮೆಯೋನ್ಯರ ಭೂಮಿಯು ಯೆಹೂದದ ಭೂಮಿಯ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ಅವರ ಅವಶ್ಯಕತೆಗಿಂತ ಹೆಚ್ಚು ಭೂಮಿ ಇದ್ದಕಾರಣ ಸಿಮೆಯೋನ್ಯರು ಅದರಲ್ಲಿ ಒಂದು ಭಾಗವನ್ನು ಪಡೆದುಕೊಂಡರು. ಅಧ್ಯಾಯವನ್ನು ನೋಡಿ |