ಯೆಹೋಶುವ 2:1 - ಕನ್ನಡ ಸಮಕಾಲಿಕ ಅನುವಾದ1 ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.” ಅಧ್ಯಾಯವನ್ನು ನೋಡಿ |