Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:11 - ಕನ್ನಡ ಸಮಕಾಲಿಕ ಅನುವಾದ

11 ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮ ಎದೆಯೊಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಒಬ್ಬನಲ್ಲಿಯೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:11
27 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ಮೇಲಿನ ಆಕಾಶದಲ್ಲಿಯೂ, ಕೆಳಗಿನ ಭೂಮಿಯಲ್ಲಿಯೂ ಯೆಹೋವ ದೇವರೇ ದೇವರೆಂದೂ ಮತ್ತೊಬ್ಬರಿಲ್ಲವೆಂಬುದನ್ನೂ ನೀವು ಈಗ ಗ್ರಹಿಸಿಕೊಂಡು ಮನಸ್ಸಿಗೆ ತಂದುಕೊಳ್ಳಿರಿ.


ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.


ಆದಕಾರಣ ಎಲ್ಲಾ ಕೈಗಳು ಜೋಲು ಬೀಳುವುವು ಮತ್ತು ಪ್ರತಿಯೊಬ್ಬನ ಹೃದಯವು ಕರಗುವುದು.


ಆಯಿ ಎಂಬ ಪಟ್ಟಣದವರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಪಟ್ಟಣದ ಬಾಗಿಲಿನಿಂದ ಪ್ರಾರಂಭಿಸಿ ಶೆಬಾರಿಮಿನವರೆಗೂ ಅವರನ್ನು ಹಿಂದಟ್ಟಿ, ಅವರನ್ನು ಹೊಡೆದರು. ಆದ್ದರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.


ಜನಾಂಗಗಳು ಯೆಹೋವ ದೇವರ ಹೆಸರಿಗೂ, ಭೂರಾಜರೆಲ್ಲರೂ ನಿಮ್ಮ ಮಹಿಮೆಗೂ ಭಯಪಡುವರು.


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ.


ನಿನೆವೆ ಬರಿದಾಗಿದೆ, ಸುಲಿಗೆಯಾಗಿದೆ, ಹಾಳುಬಿದ್ದಿದೆ, ಹೃದಯಗಳು ಕರಗುತ್ತವೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲರ ಸೊಂಟಗಳಲ್ಲಿ ಸಂಕಟವಿದೆ; ಎಲ್ಲಾ ಮುಖಗಳು ಕಳೆಗುಂದುತ್ತವೆ.


ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.


ಆದರೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದೆನು.


ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು.


ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.


ಜನರು ಇದನ್ನು ಕೇಳಿದಾಗ ಭಯಪಡುವರು. ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವುದು.


ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಅವರು ನೀರಿನಂತೆ ಕರಗಿಹೋಗಲಿ. ಅವರು ತಮ್ಮ ಬಾಣಗಳನ್ನು ಗುರಿಯಿಡುವಾಗ ಡೊಂಕಾಗಿ ಹೋಗಲಿ.


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.


ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು