ಯೆಹೋಶುವ 2:14 - ಕನ್ನಡ ಸಮಕಾಲಿಕ ಅನುವಾದ14 ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು. ಅಧ್ಯಾಯವನ್ನು ನೋಡಿ |
ಅರಸನು ಹಾದು ಹೋಗುತ್ತಿರುವಾಗ, ಪ್ರವಾದಿಯು ಅರಸನಿಗೆ ಕೂಗಿ ಹೇಳಿದ್ದೇನೆಂದರೆ, “ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ಸೆರೆಯವನನ್ನು ನನ್ನ ಬಳಿಗೆ ಹಿಡಿದುಕೊಂಡು ಬಂದು, ‘ಈ ಮನುಷ್ಯನನ್ನು ಕಾಯಿ. ಇವನು ತಪ್ಪಿಸಿಕೊಂಡುಹೋದರೆ ನಿನ್ನ ಪ್ರಾಣವು ಇವನ ಪ್ರಾಣಕ್ಕೆ ಬದಲಾಗಿರುವುದು. ಇಲ್ಲವೆ ನೀನು ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಡಬೇಕು,’ ಎಂದನು.