ಯೆಹೋಶುವ 2:16 - ಕನ್ನಡ ಸಮಕಾಲಿಕ ಅನುವಾದ16 ಆಕೆಯು ಅವರಿಗೆ, “ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ, ಅವರು ತಿರುಗಿ ಬರುವವರೆಗೂ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು, ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಲ್ಲದೆ ಅವರಿಗೆ, “ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿಹೋಗಿ, ಮೂರು ದಿನ ಅವಿತುಕೊಂಡಿರಿ. ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಪರ್ವತಕ್ಕೆ ಓಡಿಹೋಗಿ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಕೆ ಅವರಿಗೆ, “ನೀವು ಪಶ್ಚಿಮದಿಕ್ಕಿನ ಕಡೆಗೆ ಹೋಗಿ ಬೆಟ್ಟಗಳಲ್ಲಿ ಅಡಗಿಕೊಳ್ಳಿರಿ; ಆಗ ರಾಜಭಟರು ನಿಮ್ಮನ್ನು ಕಂಡುಹಿಡಿಯಲಾರರು; ಅಲ್ಲಿ ಮೂರು ದಿನಗಳವರೆಗೆ ಅಡಗಿಕೊಂಡಿದ್ದು ರಾಜಭಟರು ಹಿಂದಿರುಗಿದ ಮೇಲೆ ನೀವು ನಿಮ್ಮ ಸ್ಥಳಕ್ಕೆ ಹೋಗಬಹುದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |