Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ನೀನು ಈ ನಮ್ಮ ಕಾರ್ಯವನ್ನು ಬಹಿರಂಗಪಡಿಸಿದರೆ, ನೀನು ನಮಗೆ ಇಟ್ಟ ಆಣೆಯಿಂದ ನಾವು ಬಿಡುಗಡೆಯಾಗಿರುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ನೀನು ನಮ್ಮ ವಿಷಯವನ್ನು ಬಹಿರಂಗಪಡಿಸಿದರೆ ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀನೇನಾದರೂ ಈ ನಮ್ಮ ವಿಷಯವನ್ನು ಬಹಿರಂಗಪಡಿಸಿದ್ದೇ ಆದರೆ ನಮ್ಮಿಂದ ಮಾಡಿಸಿದ ಪ್ರಮಾಣದಿಂದ ನಾವು ಬಿಡುಗಡೆಯಾಗಿರುತ್ತೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ನೀನು ಈ ನಮ್ಮ ಸಂಗತಿಯನ್ನು ಹೊರತರುವದಾದರೆ ನಮ್ಮಿಂದ ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆವು ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿನಗೆ ಈ ಪ್ರಮಾಣವನ್ನು ಮಾಡಿದ್ದೇವೆ. ಆದರೆ ಇದನ್ನು ನೀನು ಯಾರಿಗೂ ಹೇಳಕೂಡದು; ಒಂದುವೇಳೆ ಹೇಳಿದರೆ, ನಾವು ಈ ಪ್ರಮಾಣದಿಂದ ಮುಕ್ತರಾಗುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:20
3 ತಿಳಿವುಗಳ ಹೋಲಿಕೆ  

ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.


ಯಾವನಾದರೂ ನಿನ್ನ ಮನೆಯ ಬಾಗಿಲಿನಿಂದ ಹೊರಗೆ ಹೊರಟು ಬೀದಿಗೆ ಬಂದರೆ, ಅವನ ರಕ್ತವು ಅವನ ತಲೆಯ ಮೇಲೆ ಇರುವುದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಮಾಡಿದರೆ, ಅವನ ರಕ್ತ ಅಪರಾಧವು ನಮ್ಮ ತಲೆಯ ಮೇಲೆ ಇರುವುದು.


ಅದಕ್ಕೆ ಆಕೆಯು, “ನಿಮ್ಮ ಮಾತುಗಳ ಪ್ರಕಾರವೇ ಆಗಲಿ,” ಎಂದು ಹೇಳಿದಳು. ಅನಂತರ ಅವರನ್ನು ಕಳುಹಿಸಿಬಿಟ್ಟಳು. ಅವರು ಹೋದಾಗ, ಆ ಕಡುಗೆಂಪು ಹಗ್ಗವನ್ನು ಕಿಟಿಕಿಯಲ್ಲಿ ಕಟ್ಟಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು