ಯೆಹೋಶುವ 2:3 - ಕನ್ನಡ ಸಮಕಾಲಿಕ ಅನುವಾದ3 ಆಗ ಯೆರಿಕೋವಿನ ಅರಸನು ರಾಹಾಬಳಿಗೆ, “ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರೆದುಕೊಂಡು ಬಾ. ಏಕೆಂದರೆ ಅವರು ದೇಶವನ್ನೆಲ್ಲಾ ಗೂಢಚಾರ ಮಾಡಲು ಬಂದಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನು ರಾಹಾಬಳಿಗೆ, “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ವ್ಯಕ್ತಿಗಳನ್ನು ತಂದೊಪ್ಪಿಸು. ಅವರು ನಾಡನ್ನೆಲ್ಲಾ ಸಂಚರಿಸಿ ಬೇಹು ಮಾಡಲು ಬಂದವರು” ಎಂದು ಹೇಳಿ ಕಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆರಿಕೋವಿನ ಅರಸನು ರಾಹಾಬಳಿಗೆ - ನಿನ್ನ ಮನೆಯಲ್ಲಿಳುಕೊಂಡಿರುವ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡುವದಕ್ಕೆ ಬಂದವರು ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |