ಯೆಹೋಶುವ 2:5 - ಕನ್ನಡ ಸಮಕಾಲಿಕ ಅನುವಾದ5 ಪಟ್ಟಣದ ಬಾಗಿಲು ಮುಚ್ಚುವ ಮುಸ್ಸಂಜೆ ವೇಳೆಯಲ್ಲಿ ಆ ಮನುಷ್ಯರು ಹೊರಟು ಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ. ಅವರನ್ನು ಬೇಗ ಹಿಂದಟ್ಟಿರಿ. ನಿಮಗೆ ಸಿಕ್ಕುವರು,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಊರಬಾಗಿಲನ್ನು ಮುಚ್ಚುವ ಹೊತ್ತಿಗೆ ಕತ್ತಲಲ್ಲಿ ಹೊರಟುಹೋದರು. ಎಲ್ಲಿಗೆ ಹೋದರೆಂಬುದೂ ನನಗೆ ಗೊತ್ತಿಲ್ಲ. ಬೇಗನೆ ಅವರ ಬೆನ್ನಟ್ಟಿರಿ. ಅವರು ನಿಮಗೆ ಸಿಕ್ಕುವರು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಊರುಬಾಗಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲೊಳಗೆ ಹೊರಟುಹೋದರು. ಎಲ್ಲಿಗೆ ಹೋದರೆಂಬದೂ ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಾಯಂಕಾಲ ನಗರದ ದ್ವಾರವನ್ನು ಮುಚ್ಚುವ ಸಮಯವಾದಾಗ ಅವರು ಹೊರಟುಹೋದರು. ಅವರು ಎಲ್ಲಿಗೆ ಹೋದರೆಂಬುದು ನನಗೆ ತಿಳಿಯದು. ಆದರೂ ನೀವು ಬೇಗ ಹೋದರೆ ಅವರನ್ನು ಹಿಡಿಯಬಹುದು” ಎಂದಳು. ಅಧ್ಯಾಯವನ್ನು ನೋಡಿ |