Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:9 - ಕನ್ನಡ ಸಮಕಾಲಿಕ ಅನುವಾದ

9 “ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಕೆಯು ಮಾಳಿಗೆಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನಂದರೆ - ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿರುವದನ್ನು ಬಲ್ಲೆನು. ನಿಮ್ಮ ನಿವಿುತ್ತ ನಮಗೆ ಮಹಾಭೀತಿಯುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:9
39 ತಿಳಿವುಗಳ ಹೋಲಿಕೆ  

“ನೀವು ಹೋಗುವ ಎಲ್ಲ ಜಾಗಗಳಲ್ಲಿಯೂ ನನ್ನ ಮೇಲಿನ ಭೀತಿಯನ್ನು ನಿಮ್ಮನ್ನು ಎದುರಿಸುವ ಜನರಲ್ಲಿ ಉಂಟುಮಾಡಿಸಿ, ಕಳವಳವನ್ನು ಉಂಟುಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿಸುವಂತೆ ಮಾಡುವೆನು.


ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.


ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.


ಉನ್ನತ ಆಕಾಶಗಳು ಯೆಹೋವ ದೇವರದೇ, ಆದರೆ ಅವರು ಭೂಮಿಯನ್ನು ಮಾನವರಿಗೆ ಕೊಟ್ಟಿದ್ದಾರೆ.


ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು.


ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ. ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ.


ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.


ನಿನೆವೆ ಬರಿದಾಗಿದೆ, ಸುಲಿಗೆಯಾಗಿದೆ, ಹಾಳುಬಿದ್ದಿದೆ, ಹೃದಯಗಳು ಕರಗುತ್ತವೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲರ ಸೊಂಟಗಳಲ್ಲಿ ಸಂಕಟವಿದೆ; ಎಲ್ಲಾ ಮುಖಗಳು ಕಳೆಗುಂದುತ್ತವೆ.


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಆಗ ಸಿಂಹ ಹೃದಯರಾದ ಪರಾಕ್ರಮಶಾಲಿಯ ಹೃದಯವು ಸಹ ಸಂಪೂರ್ಣ ಕರಗುವುದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ, ಅವನ ಸಂಗಡ ಇರುವವರು ಪರಾಕ್ರಮಶಾಲಿಗಳೆಂದೂ ಇಸ್ರಾಯೇಲರೆಲ್ಲರು ಬಲ್ಲರು.


ಅವನ ಜೊತೆಗಾರನು ಉತ್ತರಕೊಟ್ಟು, “ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲಿನ ಮನುಷ್ಯನ ಖಡ್ಗವೇ ಹೊರತು ಬೇರೆ ಅಲ್ಲ. ದೇವರು ಮಿದ್ಯಾನ್ಯರನ್ನೂ, ಈ ಸಮಸ್ತ ಪಾಳೆಯನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು.


ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.


ಆಗ ಭೂಲೋಕದ ಜನರೆಲ್ಲರೂ, ನೀವು ಯೆಹೋವ ದೇವರ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು.


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.


ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಹೋದರರಾದ ಇಸ್ರಾಯೇಲರು ಹೇಳುವುದೇನೆಂದರೆ, ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.


“ಆರೋನನು ತನ್ನ ಪಿತೃಗಳ ಸಂಗಡ ಸೇರುವನು, ಏಕೆಂದರೆ ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿಬಿದ್ದದರಿಂದ, ನಾನು ಇಸ್ರಾಯೇಲರಿಗೆ ಕೊಡುವ ದೇಶಕ್ಕೆ ಅವನು ಪ್ರವೇಶಿಸುವುದಿಲ್ಲ.


ಗೂಢಚಾರರು ಮಲಗುವುದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ, ಅವರ ಬಳಿಗೆ ಬಂದು,


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ.


ಯೊರ್ದನ್ ನದಿಗೆ ಆಚೆ ಇರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ, ಅಷ್ಟಾರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದ್ದೇವೆ.


ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.


ಈಜಿಪ್ಟಿನಿಂದ ಸುದ್ದಿ ಆದ ಹಾಗೆ ಟೈರಿನ ಸುದ್ದಿಗೆ ಬಹಳ ವೇದನೆ ಪಡುವರು.


ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.


ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು