Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 20:8 - ಕನ್ನಡ ಸಮಕಾಲಿಕ ಅನುವಾದ

8 ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇವುಗಳನ್ನು ಮಾತ್ರವಲ್ಲ ಜೆರಿಕೋವಿನ ಪೂರ್ವದಲ್ಲಿರುವ ಜೋರ್ಡನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಮರುಭೂಮಿಯಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ನಗರಗಳನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನೂ ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆ ಆಶ್ರಯನಗರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 20:8
12 ತಿಳಿವುಗಳ ಹೋಲಿಕೆ  

ರೂಬೇನನ ಗೋತ್ರದಿಂದ ಯೆರಿಕೋವಿನ ಬಳಿಯಲ್ಲಿ ಯೊರ್ದನ್ ನದಿಯ ಪೂರ್ವದಿಕ್ಕಿನ ಮರುಭೂಮಿಯಲ್ಲಿರುವ ಬೆಚೆರ್, ಅದರ ಉಪನಗರಗಳೂ; ಯಹಚ, ಅದರ ಉಪನಗರಗಳೂ;


ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಯಹಚವನ್ನೂ


ಗಾದ್ಯರ ಗೋತ್ರದಲ್ಲಿ, ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ,


ಲೇವಿ ಗೋತ್ರದ ಗೇರ್ಷೋನ್ಯರಿಗೆ ಮನಸ್ಸೆಯ ಅರ್ಧಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿನಲ್ಲಿರುವ ಗೋಲಾನನ್ನೂ ಬೆಯೆಷ್ಟೆರಾವನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ಗಾದನ ಗೋತ್ರದಿಂದ ಗಿಲ್ಯಾದಿನ ರಾಮೋತ್, ಅದರ ಉಪನಗರಗಳೂ; ಮಹನಯಿಮ್ ಅದರ ಉಪನಗರಗಳೂ;


ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.


ಅವು ಯಾವುವೆಂದರೆ, ರೂಬೇನ್ಯರಿಗೆ ಮರುಭೂಮಿಯ ಬಯಲಿನಲ್ಲಿ ಇರುವ ಬೆಚೆರ್, ಗಾದನವರಿಗೆ ಗಿಲ್ಯಾದಿನ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.


ಬಯಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಎಲ್ಲಾ ಗಿಲ್ಯಾದನ್ನೂ ಬಾಷಾನಿನಲ್ಲಿ ಓಗನ ರಾಜ್ಯದಲ್ಲಿ ಪಟ್ಟಣಗಳಾದ ಸಲ್ಕಾ ಎದ್ರೈವರೆಗೆ ಎಲ್ಲಾ ಬಾಷಾನನ್ನೂ ಸ್ವಾಧೀನಮಾಡಿಕೊಂಡೆವು.


ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.


ಕೈತಪ್ಪಿ ಅರಿಯದೆ ಅಕಸ್ಮಾತ್ತಾಗಿ ಕೊಂದವನು ಯಾವನಾದರೂ ನ್ಯಾಯಸಭೆಯ ಮುಂದೆ ಬಂದು ನಿಲ್ಲುವ ತನಕ, ಸೇಡು ತೀರಿಸಿಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿಹೋಗುವುದಕ್ಕೆ ಇಸ್ರಾಯೇಲರೆಲ್ಲರಿಗೂ, ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲಾದ ಪಟ್ಟಣಗಳು ಇವೇ.


ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು