Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇವುಗಳಲ್ಲಿ ಯೆಹೂದ ಮಲೆನಾಡಿನ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬ ಎಂದರೆ ಅನಾಕನ ತಂದೆಯಾದ ಅರ್ಬನನಗರ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬವಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:11
15 ತಿಳಿವುಗಳ ಹೋಲಿಕೆ  

ಅವು ಯಾವುವೆಂದರೆ: ಕೊಹಾತ್ಯರ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ, ಯೆಹೂದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ, ಅದರ ಸುತ್ತಲಿರುವ ಗೋಮಾಳಗಳೂ ಅವರಿಗೆ ದೊರೆತವು.


ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು.


ನಾಲ್ಕು ವರ್ಷಗಳಾದ ತರುವಾಯ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವ ದೇವರಿಗೆ ಮಾಡಿಕೊಂಡಿದ್ದ ನನ್ನ ಹರಕೆಯನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವುದಕ್ಕೆ ಅಪ್ಪಣೆಕೊಡಬೇಕು.


ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.


ಹುಮ್ಟಾ, ಹೆಬ್ರೋನೆಂಬ ಕಿರ್ಯತ್ ಅರ್ಬ, ಚೀಯೋರ್ ಎಂಬ ಒಂಬತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.


ಹೆಬ್ರೋನಿನ ಮೊದಲಿನ ಹೆಸರು ಕಿರ್ಯತ್ ಅರ್ಬ. “ಅರ್ಬ” ಎಂಬುವವನು ಅನಾಕ್ಯರಲ್ಲಿ ಪ್ರಮುಖನಾಗಿದ್ದನು. ದೇಶವು ಯುದ್ಧವಿಲ್ಲದೆ ಶಾಂತವಾಗಿತ್ತು.


ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.


ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.


ಲೇವಿಯರಿಗೆ ಮೊದಲನೆಯ ಚೀಟು ಬಿದ್ದ ಕಾರಣ, ಲೇವಿ ಗೋತ್ರಕ್ಕೆ ಸೇರಿದ ಕೊಹಾತ್ಯರಾದ ಆರೋನನ ಸಂತತಿಯರಿಗೆ ಯೆಹೂದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ ಕೂಡಲಾದ ಪಟ್ಟಣಗಳ ವಿವರ:


ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೂ ಬಾಧ್ಯತೆಯಾಗಿ ಕೊಟ್ಟರು.


ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು