Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:43 - ಕನ್ನಡ ಸಮಕಾಲಿಕ ಅನುವಾದ

43 ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯೆಹೋವನು ಇಸ್ರಾಯೇಲ್ಯರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಿಸಿಕೊಂಡು ಅದರಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:43
26 ತಿಳಿವುಗಳ ಹೋಲಿಕೆ  

ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಿ ಹೋಗಬೇಕು. ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ,


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.


ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.


ಈ ಪಟ್ಟಣಗಳ ಸುತ್ತಲೂ ಪ್ರತಿ ಒಂದಕ್ಕೂ ಗೋಮಾಳಗಳಿದ್ದವು. ಎಲ್ಲ ಪಟ್ಟಣಗಳಿಗೂ ಹೀಗೆಯೇ ಇದ್ದವು.


ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.


ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ.


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ, ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಕಾನಾನ್ ದೇಶದೊಳಗೆ ಬರುವಾಗ, ನಿಮಗೆ ಸೊತ್ತಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.


ನೀವು ಮುತ್ತಿಗೆ ಹಾಕಿ ವಶಪಡಿಸಿಕೊಳ್ಳಲಿಕ್ಕಿರುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವ ದೇವರು ತೆಗೆದುಹಾಕುವರು. ನೀವು ಅವರನ್ನು ಹೊರಗೆ ಓಡಿಸಿ, ಅಲ್ಲಿ ನೀವು ನೆಲೆಸಿದಾಗ,


ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಆದರೆ ನಿನ್ನ ದೇವರಾದ ಕೆಮೋಷನು ನಿನ್ನ ಮುಂದೆ ಹೊರಡಿಸುವವರ ದೇಶವನ್ನು ನೀನು ಸ್ವಾಧೀನ ಮಾಡಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವ ದೇವರು ನಮ್ಮ ಮುಂದೆ ಹೊರಡಿಸುವವರ ದೇಶವನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಳ್ಳುವೆವು.


“ಯಾಕೋಬನು ಈಜಿಪ್ಟಿಗೆ ಬಂದ ತರುವಾಯ, ನಿಮ್ಮ ತಂದೆಗಳು ಯೆಹೋವ ದೇವರಿಗೆ ಮೊರೆಯಿಟ್ಟರು. ಆಗ ಯೆಹೋವ ದೇವರು ಮೋಶೆಯನ್ನೂ, ಆರೋನನನ್ನೂ ಕಳುಹಿಸಿದರು. ಇವರು ನಿಮ್ಮ ಪಿತೃಗಳನ್ನು ಈಜಿಪ್ಟಿನಿಂದ ಕರೆತಂದು, ಅವರನ್ನು ಈ ದೇಶದಲ್ಲಿ ವಾಸಿಸುವಂತೆ ಮಾಡಿದರು.


ಅವರು ಅದರಲ್ಲಿ ನಿವಾಸಮಾಡಿ, ಅದರಲ್ಲಿ ನಿಮ್ಮ ಹೆಸರಿಗೆ ಪರಿಶುದ್ಧವಾದ ಸ್ಥಳವನ್ನು ಕಟ್ಟಿಸಿ,


ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.


ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು