ಯೆಹೋಶುವ 22:19 - ಕನ್ನಡ ಸಮಕಾಲಿಕ ಅನುವಾದ19 ನೀವು ಸ್ವಾಧೀನಪಡಿಸುವ ನಾಡು ಅಶುದ್ಧವಾಗಿದ್ದರೆ, ಯೆಹೋವ ದೇವರ ಗುಡಾರವಿರುವ ಯೆಹೋವ ದೇವರ ನಾಡಿಗೆ ನೀವು ಬಂದು, ನಮ್ಮ ಮಧ್ಯದಲ್ಲಿ ಸೊತ್ತನ್ನು ತೆಗೆದುಕೊಳ್ಳಿರಿ. ಯೆಹೋವ ದೇವರ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವುದರಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿ ಬೀಳಬೇಡಿರಿ. ನಮಗೆ ವಿರೋಧವಾಗಿಯೂ ತಿರುಗಿ ಬೀಳಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿಮ್ಮ ನಾಡು ಅಶುದ್ಧವಾಗಿದೆಯೆಂದು ತೋರಿದರೆ ಸರ್ವೇಶ್ವರನ ಗುಡಾರವಿರುವ ಅವರ ಸ್ವಂತ ನಾಡಿಗೆ ಬಂದು ನಮ್ಮ ಮಧ್ಯೆಯಿರುವ ಸೊತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠ ಒಂದನ್ನು ಬಿಟ್ಟು ನಿಮಗಾಗಿ ಇನ್ನೊಂದನ್ನು ಕಟ್ಟಿಕೊಂಡು ಸರ್ವೇಶ್ವರನಿಗೂ ನಮಗೂ ವಿರುದ್ಧ ತಿರುಗಿಬೀಳಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿಮ್ಮ ದೇಶವು ಅಶುದ್ಧವಾಗಿದೆಯೆಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ನಮ್ಮ ದೇವರಾದ ಯೆಹೋವನ ವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “‘ನಿಮ್ಮ ಪ್ರದೇಶವು ದೇವಾರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ. ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ. ಅಧ್ಯಾಯವನ್ನು ನೋಡಿ |