ಯೆಹೋಶುವ 22:22 - ಕನ್ನಡ ಸಮಕಾಲಿಕ ಅನುವಾದ22 “ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.