ಯೆಹೋಶುವ 22:23 - ಕನ್ನಡ ಸಮಕಾಲಿಕ ಅನುವಾದ23 ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾವು ಸರ್ವೇಶ್ವರನಿಂದ ವಿಮುಖರಾಗಿ ದಹನಬಲಿಯನ್ನಾಗಲಿ, ಸಮಾಧಾನ ಬಲಿಯನ್ನಾಗಲಿ, ಧಾನ್ಯನೈವೇದ್ಯವನ್ನಾಗಲಿ ಸಮರ್ಪಿಸುವುದಕ್ಕಾಗಿ ಈ ಬಲಿಪೀಠವನ್ನು ಕಟ್ಟಿದ್ದರೆ ಸರ್ವೇಶ್ವರನೇ ನಮ್ಮನ್ನು ಶಿಕ್ಷಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವದಕ್ಕೋಸ್ಕರ ಈ ವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾವು ದೇವರ ಕಟ್ಟಳೆಗಳನ್ನು ಉಲ್ಲಂಘಿಸಿದ್ದರೆ ಯೆಹೋವನೇ ನಮ್ಮನ್ನು ಶಿಕ್ಷಿಸಲಿ ಎಂದು ಆತನಲ್ಲಿ ಕೇಳಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿ |