ಯೆಹೋಶುವ 22:24 - ಕನ್ನಡ ಸಮಕಾಲಿಕ ಅನುವಾದ24 “ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವ ದೇವರಲ್ಲಿ ನಿಮಗೇನು ಪಾಲಿದೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಾವು ಇದನ್ನು ಕಟ್ಟಿದ್ದು ಒಂದು ವಿಶೇಷ ಉದ್ದೇಶಕ್ಕಾಗಿ; ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಯೇಲಿನ ದೇವರಾದ ಸರ್ವೇಶ್ವರನಲ್ಲಿ ನಿಮಗೇನು ಪಾಲಿದೆ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ - ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯಸಮರ್ಪಣೆ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಿದ್ದೇವೆ ಎಂದು ನೀವು ತಿಳಿದಿರುವಿರೇನು? ಇಲ್ಲ! ನಾವು ಆ ಕಾರಣಕ್ಕಾಗಿ ಇದನ್ನು ಕಟ್ಟಲಿಲ್ಲ. ನಾವು ಈ ಯಜ್ಞವೇದಿಕೆಯನ್ನು ಕಟ್ಟಿರುವುದಕ್ಕೆ ಕಾರಣವೇನೆಂದರೆ ಮುಂದಿನ ಕಾಲದಲ್ಲಿ ನಿಮ್ಮ ಜನರು ನಮ್ಮನ್ನು ತಮ್ಮ ಜನಾಂಗದ ಒಂದು ಭಾಗವೆಂದು ಸ್ವೀಕರಿಸದೆ ಇಸ್ರೇಲಿನ ದೇವರಾದ ಯೆಹೋವನನ್ನು ಆರಾಧಿಸಲು ಅವಕಾಶಕೊಡದಿರಬಹುದು ಎಂಬ ಭಯ ನಮಗಿತ್ತು. ಅಧ್ಯಾಯವನ್ನು ನೋಡಿ |