Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:30 - ಕನ್ನಡ ಸಮಕಾಲಿಕ ಅನುವಾದ

30 ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರೂ ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರು ಹೇಳಿದ ಮಾತುಗಳನ್ನು ಕೇಳಿದಾಗ ಅವರಿಗೆ ಮೆಚ್ಚಿಕೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಾಜಕ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದಿದ್ದ ಕುಲಾಧಿಪತಿಗಳು, ಇಸ್ರಯೇಲಿನ ಮುಖ್ಯಸ್ಥರು ರೂಬೇನ್, ಗಾದ್ ಹಾಗೂ ಮನಸ್ಸೆಕುಲಗಳವರ ಈ ಮಾತುಗಳನ್ನು ಕೇಳಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳೂ ರೂಬೇನ್ ಗಾದ್ ಮನಸ್ಸೆಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯಾಜಕನಾದ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಮಾತುಗಳನ್ನು ಕೇಳಿದರು. ಇವರು ಹೇಳುತ್ತಿರುವುದು ಸತ್ಯ ಎಂದು ಅವರಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:30
11 ತಿಳಿವುಗಳ ಹೋಲಿಕೆ  

ಆ ಮಾತನ್ನು ಇಸ್ರಾಯೇಲರು ಕೇಳಿ ಸಂತೋಷಪಟ್ಟು ದೇವರನ್ನು ಕೊಂಡಾಡಿದರು. ಆದ್ದರಿಂದ ಅವರು ರೂಬೇನ್ಯರೂ ಗಾದ್ಯರೂ ನಿವಾಸವಾಗಿದ್ದ ನಾಡಿನ ಮೇಲೆ ಯುದ್ಧಮಾಡಿ ಅವರನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.


ಈ ಮಾತು ಅರಸನಿಗೂ ಶ್ರೇಷ್ಠರಿಗೂ ಸರಿಯೆಂದು ತೋರಿತು. ಆದುದರಿಂದ ಅರಸನು ಮೆಮೂಕಾನ್ ಮಾತಿನಂತೆಯೇ ಮಾಡಿದನು.


ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು.


ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ನಿಜವಾಗಿಯೂ ಯೆಹೋವ ದೇವರಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವುದು ನನ್ನ ದೃಷ್ಟಿಗೆ ಒಳ್ಳೆಯದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ.


ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನನ್ನೂ, ಜೇಬನನ್ನೂ ಒಪ್ಪಿಸಿಕೊಡಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು?” ಎಂದನು. ಅವನು ಈ ಮಾತು ಹೇಳಿದಾಗ, ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.


ಕಾನಾನ್ಯರ ಪುತ್ರಿಯರು ತನ್ನ ತಂದೆ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ಏಸಾವನು ತಿಳಿದು,


“ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.


ಯಾಜಕನಾಗಿರುವ ಎಲಿಯಾಜರನ ಪುತ್ರ ಫೀನೆಹಾಸನು ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರಿಗೆ, “ನೀವು ಯೆಹೋವ ದೇವರಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಅವರು ನಮ್ಮ ಮಧ್ಯದಲ್ಲಿರುತ್ತಾರೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವ ದೇವರ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು