ಯೆಹೋಶುವ 22:34 - ಕನ್ನಡ ಸಮಕಾಲಿಕ ಅನುವಾದ34 ರೂಬೇನ್ಯರೂ ಗಾದ್ಯರೂ ಆ ಬಲಿಪೀಠಕ್ಕೆ, “ನಮ್ಮ ನಡುವೆ ಯೆಹೋವ ದೇವರೇ ದೇವರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ,” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ರೂಬೇನ್ಯರು ಹಾಗೂ ಗಾದ್ಯರು ‘ಸರ್ವೇಶ್ವರನೇ ದೇವರು’ ಎಂಬುದಕ್ಕೆ ಈ ಬಲಿಪೀಠವೇ ಸಾಕ್ಷಿ ಎಂದು ಹೇಳಿ ಅದಕ್ಕೆ ‘ಏದ್’ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬದಕ್ಕೆ ಈ ವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ರೂಬೇನ್ಯರು ಮತ್ತು ಗಾದ್ಯರು, “ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಕೆಯೇ ಸಾಕ್ಷಿ” ಎಂದು ಅದಕ್ಕೆ “ಏದ್” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |
ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.