Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಸರ್ವೇಶ್ವರನ ದಾಸ ಮೋಶೆಯು ನಿಮಗೆ ಕೊಟ್ಟ ಧರ್ಮಶಾಸ್ತ್ರವನ್ನೂ ವಿಧಿಗಳನ್ನೂ ಜಾಗರೂಕತೆಯಿಂದ ಕೈಗೊಳ್ಳಿರಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾರ್ಗದಲ್ಲಿ ನಡೆಯಿರಿ; ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನೇ ನೆಚ್ಚಿಕೊಂಡು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ಅವರಿಗೆ ಸೇವೆ ಸಲ್ಲಿಸಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವಿಧಿಗಳನ್ನು ಜಾಗರೂಕತೆಯಿಂದ ಕೈಕೊಳ್ಳಿರಿ. ಹೀಗಿರಲಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನೇ ಹೊಂದಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಆತನನ್ನು ಸೇವಿಸಿರಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:5
50 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’


ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಎಚ್ಚರಿಕೆಯಿಂದ ಕಾಪಾಡಿ, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರನ್ನು ಅಂಟಿಕೊಂಡರೆ,


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.


ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.


ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!


ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.


ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ,


ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು.


ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೂ, ಅವರು ನಿಮಗೆ ನೀಡಿದ ಷರತ್ತುಗಳನ್ನೂ, ಅವರ ತೀರ್ಪುಗಳನ್ನೂ ಎಚ್ಚರಿಕೆಯಿಂದ ಕೈಗೊಳ್ಳಬೇಕು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ಆಗ ಸಮುಯೇಲನು ಜನರಿಗೆ, “ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ. ಆದರೂ ಯೆಹೋವ ದೇವರನ್ನು ಬಿಟ್ಟು ತಿರುಗದೆ, ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರನ್ನು ಸೇವಿಸಿರಿ.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಆದರೆ, ಈವರೆಗೂ ಹೇಗೋ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿರಿ.


ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು.


ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.


ಆದರೆ ನಿಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾದ ನೀವೆಲ್ಲರು ಇಂದಿನವರೆಗೆ ಬದುಕಿದ್ದೀರಿ.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.


ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.


ಆದರೆ ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು. ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು.


“ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಗೊಳ್ಳಬೇಕು. ಬೇರೆ ದೇವರುಗಳ ಹೆಸರನ್ನು ಎತ್ತಬೇಡ. ಅದನ್ನು ಉಚ್ಚರಿಸಲೂ ಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು