Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:8 - ಕನ್ನಡ ಸಮಕಾಲಿಕ ಅನುವಾದ

8 “ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನೀವು ಬಹಳ ಆಸ್ತಿಯುಳ್ಳವರಾಗಿ ದನಕರು, ಬೆಳ್ಳಿಬಂಗಾರ, ಕಂಚು ಕಬ್ಬಿಣ, ವಸ್ತ್ರ ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ. ನೀವು ಶತ್ರುಗಳಿಂದ ಪಡೆದ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲುಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಬಹಳ ದನ, ಕುರಿ, ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ ಮೊದಲಾದ ವಸ್ತು ಸಮೃದ್ಧಿಯುಳ್ಳವರಾಗಿ ನಿಮ್ಮ ನಿವಾಸಗಳಿಗೆ ಹೋಗಿರಿ; ನೀವು ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು, “ನೀವು ಬಹಳ ಶ್ರೀಮಂತರಾಗಿದ್ದೀರಿ, ನಿಮ್ಮಲ್ಲಿ ಬಹಳ ಪಶುಗಳಿವೆ; ನಿಮ್ಮಲ್ಲಿ ಚಿನ್ನ, ಬೆಳ್ಳಿ ಮತ್ತು ಬೆಲೆಬಾಳುವ ರತ್ನಾಭರಣಗಳಿವೆ. ನಿಮ್ಮಲ್ಲಿ ಸುಂದರವಾದ ಅನೇಕ ಬಟ್ಟೆಗಳಿವೆ. ನೀವು ನಿಮ್ಮ ಶತ್ರುಗಳಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡಿದ್ದೀರಿ. ಈ ವಸ್ತುಗಳನ್ನು ನಿಮ್ಮ ಸಹೋದರರೊಂದಿಗೂ ಹಂಚಿಕೊಳ್ಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:8
12 ತಿಳಿವುಗಳ ಹೋಲಿಕೆ  

ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಭಟರಿಗೂ, ಸಮಸ್ತ ಸಭೆಗೂ ಎರಡು ಪಾಲನ್ನು ಮಾಡಬೇಕು.


ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.


ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.


ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.


ಆದ್ದರಿಂದ ಯೆಹೋವ ದೇವರು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದರು. ಯೆಹೂದವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟದ್ದರಿಂದ, ಅವನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಯಿತು.


ಇವನು ದಾವೀದನನ್ನು ಕರೆದುಕೊಂಡು ಅಲ್ಲಿಗೆ ಹೋದಾಗ, ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶದಲ್ಲಿಯೂ, ಯೆಹೂದ ದೇಶದಲ್ಲಿಯೂ ವ್ಯಾಪಿಸಿಕೊಂಡು, ಸಮಸ್ತ ಕೊಳ್ಳೆ ತೆಗೆದುಕೊಂಡು ಬಂದುದರಿಂದ, ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.


ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.


ಗಿಲ್ಯಾದಿನ ದೇಶದಲ್ಲಿ ಅವನ ಪಶುಗಳು ಹೆಚ್ಚಾದುದರಿಂದ, ಅವನು ಪೂರ್ವದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲ್ಗೊಂಡು ಮರುಭೂಮಿಯ ಪ್ರದೇಶದವರೆಗೂ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು