Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:16 - ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:16
16 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.


ಇಸ್ರಾಯೇಲರನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಇದೆಲ್ಲವೂ ಆಯಿತು. ಅವರು ಬೇರೆ ದೇವರುಗಳನ್ನು ಆರಾಧಿಸಿದರು.


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.’ ”


ಏಕೆಂದರೆ ನಿಮ್ಮ ಮಧ್ಯದಲ್ಲಿರುವ ನಿಮ್ಮ ಯೆಹೋವ ದೇವರು ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರು. ನಿಮ್ಮ ದೇವರ ಕೋಪವು ನಿಮ್ಮ ಮೇಲೆ ಉರಿಯಲು, ಅವರು ನಿಮ್ಮನ್ನು ಭೂಮಿಯ ಮೇಲಿನಿಂದ ತೆಗೆದುಹಾಕುವರು.


ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ,


ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು.


“ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ ಕೈಗೊಂಡು ನಡೆಯದೆ ನನ್ನಿಂದ ದೂರಹೋಗಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ,


ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು