ಯೆಹೋಶುವ 23:5 - ಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಉಳಿದವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು, ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿ ಬಿಡುವರು. ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮ್ಮ ದೇವರಾದ ಸರ್ವೇಶ್ವರ ತಾವೇ ಉಳಿದವರನ್ನು ನಿಮ್ಮ ಕಣ್ಮುಂದೆ ಹೊರಡಿಸಿಬಿಡುವರು. ಅವರ ವಾಗ್ದಾನದಂತೆ ಆ ಜನರ ನಾಡನ್ನು ನೀವು ವಶಪಡಿಸಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣುಮುಂದೆ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವತಂತ್ರಿಸಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ನಿಮ್ಮ ದೇವರಾದ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತದಿಂದ ಹೊರಡಿಸುತ್ತಾನೆ. ಆ ಪ್ರದೇಶವನ್ನು ನೀವು ಪಡೆದುಕೊಳ್ಳುತ್ತೀರಿ. ನಿಮ್ಮ ದೇವರಾದ ಯೆಹೋವನು ನಿಮಗಾಗಿ ಇದನ್ನು ಮಾಡುವುದಾಗಿ ವಾಗ್ದಾನ ಮಾಡಿದ್ದಾನೆ. ಅಧ್ಯಾಯವನ್ನು ನೋಡಿ |