ಯೆಹೋಶುವ 23:7 - ಕನ್ನಡ ಸಮಕಾಲಿಕ ಅನುವಾದ7 ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವರುಗಳ ಹೆಸರುಗಳನ್ನು ಸ್ಮರಿಸಲೂ ಬೇಡಿರಿ. ಅವುಗಳ ಮೇಲೆ ಆಣೆಯೂ ಇಡಬೇಡಿರಿ. ಅವುಗಳಿಗೆ ಆರಾಧನೆ ಮಾಡಬಾರದು. ಅಡ್ಡಬೀಳಲೂಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಉಳಿದಿರುವ ಈ ಜನಾಂಗಗಳ ಜೊತೆಯಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಲೂ ಪ್ರಮಾಣಮಾಡಲೂಬಾರದು, ಅವುಗಳಿಗೆ ಅಡ್ಡಬಿದ್ದು ಸೇವಿಸಲೂಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ. ಅಧ್ಯಾಯವನ್ನು ನೋಡಿ |